ರಾಜ್ಯ ಸರ್ಕಾರದ ಮುಜರಾಯಿ ಇಲಾಖೆಯ ಅಡಿಯಲ್ಲಿ ಬರುವ ಎಲ್ಲಾ ದೇವಸ್ಥಾನಗಳಲ್ಲಿ ನವೆಂಬರ್ 5ರಂದು ಆಚರಣೆ ಮಾಡುವ ಬಲಿಪಾಡ್ಯಮಿಯಂದು ಗೋವಿನ ಪೂಜೆಯನ್ನು ಅಂದು ಸಂಜೆ 5.30ರಿಂದ 6.30ರ ಗೋಧೂಳಿ ಲಗ್ನದಲ್ಲಿ ಪೂಜೆ ಮಾಡುವಂತೆ ಆದೇಶ ನೀಡಲಾಗಿದೆ.
ಬಲಿ ಪಾಡ್ಯಮಿಯಂದು ನಡೆಯುವ ಗೋ ಪೂಜೆ
ದೀಪಾವಳಿ ಹಬ್ಬದ ಸಂಭ್ರಮದಲ್ಲಿ ಗ್ರಾಮೀಣ ಪ್ರದೇಶದಲ್ಲಿ ಗೋ ಪೂಜೆ ಕೂಡ ಪ್ರಮುಖ ಸ್ಥಾನವನ್ನು ಪಡೆದಿದೆ.ಮನೆಯಲ್ಲಿರುವ ದನ ಕರುಗಳಿಗೆ ಅಲಂಕರಿಸಿ, ಅವುಗಳಿಗೆ ಪೂಜೆ ಮಾಡಿ, ತಿಂಡಿತಿನಿಸುಗಳನ್ನು ನೀಡುವ ಸಂಪ್ರದಾಯವು ಈಗಲೂ ನಡೆದು ಬಂದಿದೆ.m
ಮಹಾಭಾರತದ ಕಾಲಘಟ್ಟದಲ್ಲಿ ಕಾರ್ತಿಕ ಶುದ್ಧ ಪಾಡ್ಯದ ದಿನದಂದು ಶ್ರೀ ಕೃಷ್ಣ ಗೋವರ್ಧನ ಗಿರಿಯನ್ನು ಎತ್ತಿ ಹಿಡಿದು ಗೋಪಾಲಕರಿಗೆ ರಕ್ಷಣೆ ನೀಡಿದ ಎಂಬ ಪ್ರತೀತಿಯೂ ಇದೆ. ಈ ದಿನದಂದು ಗೋವರ್ಧನ, ಗೋ ಪೂಜೆಯನ್ನು ಮಾಡುವ ಸಂಪ್ರದಾಯವಿದೆ. ಕೃಷ್ಣ, ಗೋಪ-ಗೋಪಿಯರ, ಇಂದ್ರ, ಹಸುಗಳ, ಕರುಗಳ ಚಿತ್ರಗಳನ್ನು ಜೋಡಿಸಿ ಮೆರವಣಿಗೆ ಮಾಡುತ್ತಾರೆ. ಗೋಪೂಜೆಯನ್ನು ಬಲಿಪಾಡ್ಯಮಿ ದಿನದಂದು ಆಚರಣೆ ಮಾಡಲಾಗುತ್ತದೆ. ಬಲಿಚಕ್ರವರ್ತಿಯ ಸಾಮ್ರಾಜ್ಯದಲ್ಲಿ ಗೋವುಗಳಿಗೆ ಅತಿಯಾದ ಮಹತ್ವ ನೀಡಲಾಗುತ್ತಿತ್ತು. ಅದಕ್ಕೆ ಪೂಜೆಗಳನ್ನು, ಆರಾಧನೆಯನ್ನು ಮಾಡಲಾಗುತ್ತಿತ್ತು. ಅದರ ಸವಿನೆನಪಿಗಾಗಿ ಬಲಿಪಾಡ್ಯಮಿ ದಿವಸ ಗೋವುಗಳಿಗೆ ಪೂಜೆ ಸಲ್ಲಿಸಲಾಗುತ್ತದೆ. ಇನ್ನು ಹೆಚ್ಚಿನ ಕಡೆಗಳಲ್ಲಿ ಆ ದಿನದಂದು ಹಸುವಿನ ಹಾಲನ್ನೂ ಕರೆಯಬಾರದೆಂಬ ಪ್ರತೀತಿ ಇದೆ. ಕರುಗಳು ಬೇಕಾದಷ್ಟು ಹಾಲು ಕುಡಿದು ಸಂತೋಷವಾಗಿರಬೇಕೆಂಬುದು ಇದರ ಉದ್ದೇಶ.
No comments:
Post a Comment