Sunday, March 6, 2022

ನಿರ್ಮಾಣ ಹಂತದ ಕಟ್ಟಡದಲ್ಲಿ ಅಗ್ನಿ ಅವಘಡ: ಬೆಂಕಿ ನಂದಿಸುವ ವೇಳೆ ಆಯತಪ್ಪಿ ಬಿದ್ದ ಅಗ್ನಿಶಾಮಕ ಸಿಬ್ಬಂದಿ ವಿನಯ್

ನಿರ್ಮಾಣ ಹಂತದ ಕಟ್ಟಡದಲ್ಲಿ ಅಗ್ನಿ ಅವಘಡ: ಬೆಂಕಿ ನಂದಿಸುವ ವೇಳೆ ಆಯತಪ್ಪಿ ಬಿದ್ದ ಅಗ್ನಿಶಾಮಕ ಸಿಬ್ಬಂದಿ ವಿನಯ್


Fire Accident: ನಿರ್ಮಾಣ ಹಂತದ ಕಟ್ಟಡದಲ್ಲಿ ಅಗ್ನಿ ಅವಘಡ: ಬೆಂಕಿ ನಂದಿಸುವ ವೇಳೆ ಆಯ ತಪ್ಪಿ ಬಿದ್ದ ಅಗ್ನಿಶಾಮಕ ಸಿಬ್ಬಂದಿ


ಬೆಂಗಳೂರಿನಲ್ಲಿ ಅಗ್ನಿ ಅವಘಡಗಳು ಸಂಭವಿಸುತ್ತಲೇ ಇರುತ್ತವೆ. ಅಗ್ನಿಶಾಮಕದಳ ಸಿಬ್ಬಂದಿ ಕ್ಷಣಾರ್ಧದಲ್ಲಿ ಘಟನಾ ಸ್ಥಳಕ್ಕೆ ತೆರಳಿ ರಕ್ಷಣಾ ಕಾರ್ಯದಲ್ಲಿ ತೊಡಗಿಕೊಳ್ಳುತ್ತಾರೆ. ಕೆಲ ದಿನಗಳ ಹಿಂದೆ ಅಗ್ನಿ ಅವಘಡದಲ್ಲಿ ಸಿಲುಕಿದ್ದ ತುಂಬು ಕುಟುಂಬವನ್ನು ಸಿಬ್ಬಂದಿ ರಕ್ಷಣೆ ಮಾಡಿದ್ದರು.

ಶನಿವಾರ ರಾತ್ರಿ ಸುಮಾರು 10.45ರ ವೇಳೆಗೆ ಮಾರತ್ತಹಳ್ಳಿಯ ಕಾರ್ತಿಕ್ ನಗರದಲ್ಲಿರೋ ಬಾಗಮನಿ ಟೆಕ್ ಪಾರ್ಕ್ ನಲ್ಲಿರುವ ಕಟ್ಟಡದಲ್ಲಿ ಬೆಂಕಿ ಕಾಣಿಸಿಕೊಂಡಿತ್ತು.

ಕಟ್ಟಡದ 5 ಮತ್ತು 6ನೇ ಮಹಡಿಯಲ್ಲಿ ಶಾರ್ಟ್ ಸರ್ಕ್ಯೂಟ್ ನಿಂದ ಬೆಂಕಿ ತಗುಲಿರುವ ಶಂಕೆ ವ್ಯಕ್ತವಾಗಿದೆ. ಬೆಂಕಿ ಕಾಣಿಸಿಕೊಂಡ ಭಾಗದಲ್ಲಿ ಲೊಗ್ಯಾಟೋ ಕಂಪನಿಯ ಕೆಲಸಗಳು ನಡೆದಿದ್ದವು.

ಕಟ್ಟಡದೊಳಗೆ ಥರ್ಮಾಕೋಲ್, ಪೇಪರ್ ಮತ್ತು ಫ್ಲೈವುಡ್ ಗಳು ಇದ್ದಿದ್ದರಿಂದ ಬೆಂಕಿ ಬೇಗ ಆವರಿಸಿಕೊಂಡಿದೆ. ಇನ್ನೂ ಕಟ್ಟಡದಲ್ಲಿದ್ದ ಮೂವರು ಕಾರ್ಮಿಕರು ಬೆಂಕಿ ಕಾಣಿಸಿಕೊಳ್ಳುತ್ತಿದ್ದಂತೆ ಹೊರ ಓಡಿ ಬಂದಿದ್ದಾರೆ.

ಮಧ್ಯರಾತ್ರಿ ಬೆಂಕಿ ಕೆನ್ನಾಲಿಗೆಗೆ ಕಟ್ಟಡ ಸಂಪೂರ್ಣ ಹೊತ್ತಿ ಉರಿದಿದೆ. 10 ಜನ ಅಗ್ನಿ ಶಾಮಕ ಸಿಬ್ಬಂದಿ ಲ್ಯಾಡರ್ ಬಳಸಿ ಸುಮಾರು ಮೂರು ಗಂಟೆಗಳ ಕಾಲ ಕಾರ್ಯಾಚರಣೆ ನಡೆಸಿ ಬೆಂಕಿ ನಂದಿಸಿದ್ದಾರೆ.

ಇನ್ನು ಬೆಂಕಿ ನಂದಿಸುವ ವೇಳೆ ಓರ್ವ ಅಗ್ನಿಶಾಮಕ ಸಿಬ್ಬಂದಿ ನಾಲ್ಕನೇ ಮಹಡಿಯಿಂದ ಆಯತಪ್ಪಿ ಕೆಳಗೆ ಬಿದ್ದಿದ್ದಾರೆ. ನಿರ್ಮಾಣ ಹಂತದ ಕಟ್ಟಡವಾಗಿದ್ದರಿಂದ ಸುತ್ತಲೂ ನೆಟ್ ಹಾಕಲಾಗಿತ್ತು. ಹಾಗಾಗಿ ಪ್ರಾಣಾಪಾಯ  ಸಂಭವಿಸಿಲ್ಲ.

ಮಹದೇವಪುರ ಅಗ್ನಿಶಾಮಕ ಠಾಣೆಯ ಸಿಬ್ಬಂದಿ ವಿನಯ್ ಎಂಬವರು ಗಾಯಗೊಂಡಿದ್ದು, ಕೂಡಲೇ ಖಾಸಗಿ ಆಸ್ಪತ್ರೆಗೆ ರವಾನಿಸಲಾಗಿದೆ.

ವಿನಯ್ ಅವರ ಕೈ, ಕಾಲು ಮತ್ತು ತಲೆ ಭಾಗಕ್ಕೆ ಗಾಯಗಳಾಗಿದ್ದು, ಚಿಕಿತ್ಸೆ ನೀಡಲಾಗುತ್ತಿದೆ. ವಿನಯ್ ಅವರು ಏರಿಯಲ್ ಲ್ಯಾಡರ್ ಮೂಲಕ ಬೆಂಕಿ ನಂದಿಸುವ ಕಾರ್ಯಚರಣೆಯಲ್ಲಿ ತೊಡಗಿಕೊಂಡಿದ್ದರು


No comments:

Restolex ಹಾಸಿಗೆ ತಯಾರಿಕಾ ಕಾರ್ಖಾನೆಯಲ್ಲಿ ಅಗ್ನಿ ದುರಂತ

 ನೆಲಮಂಗಲ ಸಮೀಪದ ಟಿ ಬೇಗೂರು ಗ್ರಾಮದಲ್ಲಿ Restolex ಎಂಬ ಹಾಸಿಗೆ ತಯಾರಿಕಾ ಕಾರ್ಖಾನೆಯಲ್ಲಿ ಅಗ್ನಿ ಅವಘಡ ಸಂಭವಿಸಿದ್ದು, ಅಪಾರ ಪ್ರಮಾಣದ ಮಿಷನರಿ, ಕಚ್ಛಾ ಮತ್ತು ಸಿದ್...